ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿ ಮಧುಸೂದನ್ (57) ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. 12 ಮಂದಿ ಸ್ನೇಹಿತರೊಂದಿಗೆ ಮಧುಸೂದನ್ ಟಿಟಿ ವಾಹನದಲ್ಲಿ ಧರ್ಮಸ್ಥಳದತ್ತ ಸಾಗುತ್ತಿದ್ದರು. ಕೊಟ್ಟಿಗೆಹಾರದಲ್ಲಿ ವಾಹನವನ್ನು ನಿಲ್ಲಿಸಲಾಗಿತ್ತು.
ಈ ವೇಳೆ ಶೌಚಾಲಯಕ್ಕೆ ತೆರಳಿದ್ದ ಮಧುಸೂದನ್ ಕುಸಿದು ಬಿದ್ದಿದ್ದರು. ಸ್ನೇಹಿತರು ಮತ್ತು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ಮಧುಸೂದನ್ ಮೃತಪಟ್ಟಿದ್ದರು ಎಂದು ಬಣಕಲ್ ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


