ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೇರಳ ಮೂಲದ ವೇಣುಗೋಪಾಲ್(56) ಎಂದು ಗುರುತಿಸಲಾಗಿದೆ. ಇಲ್ಲಿನ ಕೇಕ್ ವಲ್ಡ್ ಬೇಕರಿಯಲ್ಲಿ ಘಟನೆ ನಡೆದಿದೆ.
ವೇಣುಗೋಪಾಲ್ ಕಳೆದ 5 ವರ್ಷದಿಂದ ಈ ಕೇಕ್ವಲ್ಡ್ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ನಿನ್ನೆ ಬೇಕರಿಯಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತಕ್ಕೀಡಾಗಿ ಕುಸಿದು ಸಾವನ್ನಪ್ಪಿದ್ದಾರೆ.
ಕುಸಿದು ಬಿದ್ದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರಿಶೀಲನೆ ನಡೆಸಿ, ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4