ಚಿಕ್ಕಮಗಳೂರು: 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.
ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಹತ್ಯೆಗೀಡಾದವರಾಗಿದ್ದಾರೆ. ಖುಷಿಯ ತಂದೆ ರತ್ನಾಕರ್ ಎಂಬಾತ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ.
ರತ್ನಾಕರ್ ನ ಪತ್ನಿ 2 ವರ್ಷಗಳ ಹಿಂದೆ ಮೋಸ ಮಾಡಿ ಹೋಗಿದ್ದಳು. ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಮಗಳ ಬಳಿ ವಿಚಾರಿಸಿದಾಗ ನೊಂದ ಮಗಳು ತಂದೆಯ ಬಳಿ ಹೇಳಿಕೊಂಡಿದ್ದಾಳೆ. ಮಗಳು ತನ್ನ ಅಮ್ಮನ ಫೋಟೋವನ್ನು ಆಲ್ಬಾಂನಿಂದ ತೆಗೆದುಕೊಂಡು ಹೋಗಿ ಶಾಲೆಯಲ್ಲಿ ಸಹಪಾಠಿಗಳಿಗೆ ತೋರಿಸಿದ್ದಳು ಎಂದು ಹತ್ಯೆಯ ಬಳಿಕ ರತ್ನಾಕರ್ ಸೆಲ್ಫಿ ವಿಡಿಯೋ ಮಾಡಿಟ್ಟಿದ್ದಾನೆ.
ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4