ಬೆಂಗಳೂರು: ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿ ಆತನ ಜೀವ ಕಾಪಾಡಿದ್ದಾರೆ.
ಸೋಮವಾರ ಬೆಳಗ್ಗೆ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಪ್ರಕಾರ, ಸೋಮವಾರ ಬೆಳಗ್ಗೆ 10:25ರ ಸುಮಾರಿಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಬಿಹಾರ ಮೂಲದ ವಾಯುಪಡೆಯ ಮಾಜಿ ವ್ಯಕ್ತಿ ಅನಿಲ್ ಕುಮಾರ್ ಪಾಂಡೆ ಎಂಬುವವರು ಹಳಿ ಮೇಲೆ ಹಾರಿದ್ದಾರೆ. ಅವರು ಟ್ರ್ಯಾ ಕ್ಗೆ ಜಿಗಿದ ತಕ್ಷಣ, ತುರ್ತು ಟ್ರಿಪ್ ಸಿಸ್ಟಮ್ (ಇಟಿಎಸ್) ಅನ್ನು ಬಳಸಿ BMRCL ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.
ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ. 10:50ಕ್ಕೆ ಹಸಿರು ಮಾರ್ಗದಲ್ಲಿ ರೈಲು ಸೇವೆಗಳನ್ನು ಪುನರಾರಂಭಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx