ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ. ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಅಟ್ಯಾಕ್ ನಲ್ಲಿ ಮದನ್ ಕೈ ಯನ್ನು ಆರೋಪಿಗಳು ಕತ್ತರಿಸಿದ್ರು. ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.


