nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    ಜಿಲ್ಲಾ ಸುದ್ದಿ August 11, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    By Ganesh TumkuruAugust 11, 2026No Comments1 Min Read

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ನಡೆದಿದೆ.

    ಶಿವಲಾಲ್ ರಾಠೋಡ (49) ಹಾಗೂ ಅವರ ಪುತ್ರಿ ಮೀರಾ ರಾಠೋಡ (15) ಮೃತರು.  ಶಿವಲಾಲ್ ಅವರ ಪತ್ನಿ ಸವಿತಾ (40), ಪುತ್ರ ಪ್ರಕಾಶ್, ಸಂಬಂಧಿಕರಾದ ಸುರೇಖಾ ಚೌವ್ಹಾಣ (30) ಮತ್ತು ವಿವೇಕ್ ಚೌವ್ಹಾಣ (12) ಗಾಯಾಳುಗಳು.

    ಗಾಯಾಳುಗಳನ್ನು ತಕ್ಷಣವೇ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಪೊಲೀಸ್ ಮೂಲಗಳ ಪ್ರಕಾರ, ಶಿವಲಾಲ್ ಹಾಗೂ ಅವರ ಪತ್ನಿ ಸವಿತಾ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿತ್ತು. ಇದರಿಂದ ಮನನೊಂದ ಸವಿತಾ ಅವರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಕರೆದುಕೊಂಡು ಪತಿಯನ್ನು ತೊರೆದು ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು.

    ಮಂಗಳವಾರ ಬೆಳಿಗ್ಗೆ ಶಿವಲಾಲ್ ತಮ್ಮ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಪತ್ನಿ ಮತ್ತು ಮಕ್ಕಳು ತಂಗಿದ್ದ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಮನೆಗೆ ಪ್ರವೇಶಿಸಿದ ತಕ್ಷಣ ಒಳಗಿನಿಂದ ಬಾಗಿಲು ಬಂದ್ ಮಾಡಿಕೊಂಡು ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಸ್ಫೋಟದ ತೀವ್ರತೆಗೆ ಶಿವಲಾಲ್ ಹಾಗೂ ಅವರ ಪುತ್ರಿ ಮೀರಾ ಅವರ ದೇಹಗಳು ಸ್ಥಳದಲ್ಲೇ ಛಿದ್ರಗೊಂಡು ಭೀಕರವಾಗಿ ಸಾವನ್ನಪ್ಪಿದ್ದಾರೆ. ಧಮಾಕಾದ ಸದ್ದು ಕೇಳಿ ಮಟಕಿ ತಾಂಡಾದ ನಿವಾಸಿಗಳು ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಸಂದರ್ಭ ತಿಳಿದ ಆಳಂದ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಲಾಲ್‌ ಗೆ ಈ ಅಪಾಯಕಾರಿ ಸ್ಫೋಟಕ ವಸ್ತು ಎಲ್ಲಿಂದ ಮತ್ತು ಹೇಗೆ ದೊರೆಯಿತು ಎಂಬ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ತುಮಕೂರು: ತಾಲ್ಲೂಕಿನ ಹಿರೇಹಳ್ಳಿ ಕೆರೆಯ ಒತ್ತುವರಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು…

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.