ಜಬಲ್ಪುರ: ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ಇಲ್ಲೊಬ್ಬ ವ್ಯಕ್ತಿ ರೈಲಿನ ಚಕ್ರಗಳ ನಡುವೆ ಅವಿತು ಬರೋಬ್ಬರಿ 290 ಕಿ.ಮೀ. ದೂರ ಪ್ರಯಾಣಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ದಾನಪುರ ಎಕ್ಸ್ ಪ್ರೆಸ್ ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರೈಲು ಟಿಕೆಟ್ ಕೊಳ್ಳಲು ಹಣವಿಲ್ಲದೇ ಈತ ರೈಲಿನ ಕೆಳಗೆ ಅವಿತು ಬರೊಬ್ಬರಿ ಸುಮಾರು 290 ಕಿ.ಮೀ ವರೆಗೂ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಮಧ್ಯಪ್ರದೇಶದ ಇಟಾರ್ಸಿಯಿಂದ ಜಬಲ್ಪುರದವರೆಗೆ ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿದ್ದಾನೆ ಎಂದು ತಿಳಿದು ಬಂದಿದೆ.
ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ S4 ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ಪತ್ತೆಯಾಗಿತ್ತು. ಹೀಗಾಗಿ ಈ ಘಟನೆ ಬೆಳಕಿಗೆ ಬಂದಿದೆ.
ವ್ಯಕ್ತಿಯನ್ನು ಹೊರತೆಗೆದ ವೇಳೆ ಆತ ಮದ್ಯ ಪಾನ ಮಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಆತನ ವರ್ತನೆ ವಿಚಿತ್ರವಾಗಿರುವುದರಿಂದ ಆತ ಮಾನಸಿಕ ಅಸ್ವಸ್ಥನೇ ಎನ್ನುವ ಶಂಕೆ ಮೂಡಿದೆ. ಸದ್ಯ ಈ ಬಗ್ಗೆ ರೈಲ್ವೇ ರಕ್ಷಣಾ ಪಡೆ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx