ಮೈಸೂರು: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅನುಗನಹಳ್ಳಿಯಲ್ಲಿ ನಡೆದಿದೆ.
ಸೂರ್ಯ ಎಂಬಾತ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವಿವಾಹಿತನಾಗಿದ್ದರೂ ಸೂರ್ಯ ಮತ್ತೊಬ್ಬಳ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಶ್ವೇತಾ ಎಂಬಾಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದ ಸೂರ್ಯ ಆಕೆಯ ಜೊತೆ ಸುತ್ತಾಡುವುದು ಖಾಸಗಿ ಫೋಟೋಗಳನ್ನ ಹಂಚಿಕೊಳ್ಳುವುದು ಮಾಡುತ್ತಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ಸಹ ಇಬ್ಬರು ತೋಟದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ಸೂರ್ಯನ ಹತ್ಯೆಯಾಗಿದೆ. ಈ ಕೊಲೆಯನ್ನು ಶ್ವೇತಾಳೆ ಮಾಡಿದ್ದಾಳೆ ಎಂದು ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನೂ ಶ್ವೇತಾ ಆಸ್ತಿಗಾಗಿ ಸೂರ್ಯನನ್ನು ಪೀಡಿಸುತ್ತಿದ್ದಳು ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಘಟನೆ ಸಂಬಂಧ ಜಯಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4