ಕೋಡಿಹಳ್ಳಿಕೆರೆ: ಬೈಕ್ ನಲ್ಲಿ ಬರುತ್ತಿದ್ದ ಯುವಕನೋರ್ವ ಮೂರ್ಛೆ ಹೋದ ಘಟನೆ ನಡೆದಿದ್ದು, ಈ ವೇಳೆ ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್ ಅವರು ಮಾನವೀಯತೆ ಮೆರೆದು ಯುವಕನನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಂದು ಬೆಳಿಗ್ಗೆ ಮೈಸೂರು ಮಾನಂದವಾಡಿ ರಸ್ತೆಯಲ್ಲಿ ಬರುತ್ತಿರುವಾಗ ಕೋಡಿಹಳ್ಳಿ ಕೆರೆಯ ಬಳಿ ಬೈಕಿನಲ್ಲಿ ಬರುತ್ತಿದ್ದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದುದನ್ನು ಗಮನಿಸಿದ ಜಯಪ್ರಕಾಶ್ ಅವರು ತಕ್ಷಣವೇ ಸ್ಥಳಿಯರ ಸಹಾಯ ಪಡೆದು, ತಮ್ಮ ಕಾರಿನಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದು, ಯುವಕನಿಗೆ ಪ್ರಜ್ಞೆ ಬರುವವರೆಗೂ ಆತನ ಜೊತೆಗೆ ಇದ್ದರು.
ಪ್ರಜ್ಞೆ ಕಳೆದುಕೊಂಡಿದ್ದ ಮೈಸೂರಿನ ಮಂಡೆನಹಳ್ಳಿ ನಿವಾಸಿ ಶ್ರೀನಿವಾಸ ಎಂಬ ಯುವಕನನ್ನು ಇಲ್ಲಿನ ಹಂಪಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಜಯಪ್ರಕಾಶ್ ಅವರು ಯುವಕನಿಗೆ ಪ್ರಜ್ಞೆ ಮರಳುವ ತನಕ ಅಲ್ಲೇ ಇದ್ದು, ಬಳಿಕ ಆರೋಗ್ಯ ವಿಚಾರಿಸಿ ಸ್ಥಳದಿಂದ ತೆರಳಿದ್ದಾರೆ.
ವರದಿ: ಚಂದ್ರ ಹಾದನೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700