ಲಂಚ ಪಡೆದಿದ್ದ ಗುಬ್ಬಿ ತಾಲೂಕು, ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಲಾಗಿದೆ.
ಯಶೋಧ ಅವರು ಕರ್ತವ್ಯದ ಸಮಯದಲ್ಲಿ ಲಂಚದ ಹಣ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಹಿನ್ನೆಲೆ. ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು.ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಮುದ್ರಾಂಕ ಇಲಾಖೆ ಆಯುಕ್ತರು ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


