ಹೆಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿದರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಸ್ಪರ್ಧಿಸಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಕಾಂಗ್ರೆಸ್ ಟಿಕೆಟ್ 16 ಆಕಾಂಕ್ಷಿಗಳು ಖರ್ಗೆಗೆ ಮನವಿ ಸಲ್ಲಿಸಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ. ಡಿಕೆ ಶಿವಕುಮಾರ್ ಸ್ಪರ್ಧಿಸದಿದ್ದರೇ ಮೂಲ ಕಾಂಗ್ರೆಸ್ಸಿಗರಿಗೆ ಆದ್ಯತೆ ನೀಡಿ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಅಮರಾವತಿ ಚಂದ್ರಶೇಖರ್ ಸತೀಶ್ ಗೌಡ ಸೇರಿ ಹಲವರು ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


