ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಪ್ಪ ಆಗ್ತಿರುವ ಖುಷಿಯಲ್ಲಿದ್ದಾರೆ. ರೆಬೆಲ್‌ಸ್ಟಾರ್ ಅಂಬರೀಶ್ ಕುಟುಂಬವು ಹೊಸ ಅತಿಥಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ 2023ರ ಜೂನ್ 5ರಂದು ಅದ್ದೂರಿಯಾಗಿ ಮದುವೆಯಾಗಿದ್ದರು. ಇನ್ನು ವರ್ಷತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಚಿತ್ರರಂಗದ ಜ್ಯೂನಿಯರ್ ರೆಬೆಲ್‌ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ಸಿದ್ಧತಾಗಿದ್ದಾರೆ. ಇನ್ನು ಅವರ ಅಭಿಮಾನಿಗಳು ಮತ್ತೆ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವಾ ಅವರಿಗೆ ಅದ್ದೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಅವರು ಮುಂದಿನ ಸಿನಿಮಾದಲ್ಲಿ ನಟಿಸುವುದಕ್ಕಾಗಿ ಕಿಕ್ ಬಾಕ್ಸಿಂಗ್ ಕಲಿಯೋಕೆ ವಿದೇಶಕ್ಕೆ ಹೋಗಿದ್ದರು. ಆದರೆ, ಈಗ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿಯೇ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದೇ ವಾರ ಅದ್ದೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


