ಕುಣಿಗಲ್: ಮಳೆಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಹಾಗೂ ಮನೆ ಹಾನಿಯಾಗಿರುವವರಿಗೆ ರೂ.10 ಸಾವಿರ ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಜಲಧಿಗೆರೆ ಮತ್ತು ಬ್ಯಾಲದಲ್ಲಿ ಮಳೆಯಿಂದ ಹಾನಿಯಾಗಿರುವ ಬೆಳೆಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎನ್.ಡಿ.ಆರ್.ಎಫ್ ನಿಂದ ರೂ.900 ಕೋಟಿ ಬಿಡುಗಡೆ ಕೋರಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 5 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಾಶವಾಗಿದೆ. ಹತ್ತು ದಿನದಲ್ಲಿ ಬೆಳೆ ಹಾನಿ ವರದಿ ಸಲ್ಲಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕಾಲಿಕ ಮಳೆಯಿಂದಾಗಿ ನಷ್ಟಕ್ಕೊಳಗಾಗಿರುವ ರೈತರಾಗಲಿ, ಮನೆ ಕಳೆದುಕೊಂಡವರಾಗಲಿ ಆತಂಕಪಡುವುದು ಬೇಡ. ಸರ್ಕಾರ ಬೆಳೆ ಹಾನಿಯಾದ ರೈತರ ನೆರವಿಗೆ ರೂ. 358 ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700