ಸರಗೂರು: ಮಳೆಯಿಂದ ಮನೆ ನಾಶವಾಗಿದ್ದರೂ, ಮನೆ ಮಂಜೂರು ಮಾಡದೇ ಇರುವ ಕಾರಣ ಕುಟುಂಬವೊಂದು ಶೌಚಾಲಯದಲ್ಲಿ ವಾಸಿಸುವಂತಹ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಸರಗೂರು ತಾಲ್ಲೂಕಿನ ಪಟ್ಟಣದ 10 ನೇ ವಾರ್ಡಿನಲ್ಲಿ ನಡೆದಿದೆ.
ಟೈಲರ್ ವೃತ್ತಿಯ ನಾಗರಾಜು ಹಾಗೂ ಅವರ ತಾಯಿ, ಪತ್ನಿ ಮಕ್ಕಳು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಕಳೆದ ವರ್ಷ ಬಿದ್ದ ಮಳೆಯಿಂದಾಗಿ ತಮ್ಮ ಮನೆಯನ್ನು ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮನೆ ಮಂಜೂರು ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಇವರಿಗೆ ಮನೆ ಮಂಜೂರು ಆಗಿಲ್ಲ, ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇವರ ಕುಟುಂಬದಲ್ಲಿ ನಾಲ್ವರು ಸದಸ್ಯರಿದ್ದು, ಆದರೆ, ಮನೆ ಇಲ್ಲದ ಕಾರಣ ಇವರು ಶೌಚಾಲಯದಲ್ಲಿ ವಾಸಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೊಂದು ಗಂಭೀರ ಪರಿಸ್ಥಿತಿಗಳಿದ್ದರೂ, ಪಟ್ಟಣ ಪಂಚಾಯತ್, ತಾಲೂಕು ಆಡಳಿತ ಮನೆಯನ್ನು ಮಂಜೂರು ಮಾಡಿಲ್ಲ ಎಂದು ಸ್ಥಳೀಯರಾದ ರಮೇಶ್ ಎಂಬವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಕಟ್ಟಡ ನಿರ್ಮಾಣ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, ಮಳೆಯ ಸಮಯದಲ್ಲಿ ಮನೆ ಸಂಪೂರ್ಣವಾಗಿ ಬಿದ್ದು ಹೋಗಿದ್ದರೂ, ಇನ್ನೂ ಮನೆ ಮಂಜೂರು ಆಗಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಿಸಬೇಕು. ಇಲ್ಲವಾದರೆ, ಅಧಿಕಾರಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB