ಯಳಂದೂರು: ಮಗಳು ಯುವಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪೋಷಕರು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಳ್ಳೇಗಾಲದ ಯಳಂದೂರು ತಾಲೂಕಿನಲ್ಲಿ ನಡೆದಿದೆ.
ಕಳೆದ 5 ದಿನಗಳ ಹಿಂದೆ ಕಾಲೇಜಿಗೆ ತೆರಳಿದ್ದ ಮಗಳು ಯುವಕನೊಂದಿಗೆ ಪರಾರಿಯಾಗಿದ್ದಳು ಎನ್ನಲಾಗಿದೆ. ಘಟನೆಯಿಂದ ಆಘಾತಕ್ಕೊಳಗಾದ ದಂಪತಿ ಮನೆ ಬಿಟ್ಟು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ದಂಪತಿ ಮತ್ತು ಅವರ ಮಗಳು ಕಾಣೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಸಂಬಂಧಿಕರು ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಇದೀಗ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


