ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಮಣೆಚಂಡೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಮ್ಮ ರಮೇಶ್ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಯ್ಯದ್ ಯೂನಿಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಮಾಯಸಂದ್ರ ಹೋಬಳಿ ಮಣೆಚಂಡೂರು ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಸಯ್ಯದ್ ಯೂನಿಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ಸ್ಪರ್ಧಿಸದ ಹಿನ್ನೆಲೆಯಲ್ಲಿ ಸಯ್ಯದ್ ಯೂನಿಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇನ್ನೂ ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು. ಈ ವೇಳೆ ಮಾತನಾಡಿದ ಸಯ್ಯದ್ ಯೂನಿಸ್ ಅವರು, ನಿಮ್ಮೆಲ್ಲರ ಸಹಕಾರದಿಂದ ನಾನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದೇನೆ. ನಿಮ್ಮ ಸೇವೆಯನ್ನು ನಿಷ್ಪಕ್ಷಪಾತವಾಗಿ ಮಾಡುತ್ತೇನೆ. ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಮಲ್ಲೂರು ತಿಮ್ಮೇಶ್, ಎ.ಪಿ.ಎಂ.ಸಿ. ಅಧ್ಯಕ್ಷರಾದ ನರಸಿಂಹ, ಆರ್.ಎಸ್ ಪಾಳ್ಯ ಮಹಮದ್, ಬಸವರಾಜು .ವಿ.ಎಸ್.ಎಸ್.ಎನ್. ಮಾಜಿ ಅಧ್ಯಕ್ಷರು, ಯುವ ಮುಖಂಡರಾದ ಹರೀಶ್ ಮುನಿಯಪ್ಪ, ಕೋಡಿಹಳ್ಳಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700