ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ ಲಂಕೆ ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಗಳಿಗೆ ಚರಂಡಿ ನೀರು ನುಗ್ಗಿರುವ ಘಟನೆ ನಡೆದಿದ್ದು, ಚರಂಡಿಯನ್ನು ಸ್ವಚ್ಛತೆಗೊಳಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಂಕೆ ಎರಡನೇ ಬ್ಲಾಕ್ ನ ಗ್ರಾಮ ಪಂಚಾಯತ್ ಚರಂಡಿ ಸ್ವಚ್ಛಗೊಳಿಸದೇ ಹಾಗೆಯೇ ಬಿಟ್ಟಿದ್ದು, ಚರಂಡಿಯಲ್ಲಿ ತುಂಬಿದ್ದ ಕಸಗಳಿಂದಾಗಿ ಸುಗಮವಾಗಿ ನೀರು ಹರಿಯದೇ, ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚರಂಡಿಯನ್ನು ಸ್ವಚ್ಛಗೊಳಿಸದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗ್ರಾಮದ ಯುವ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೂ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಕೊಳಚೆ ನೀರಿನಿಂದಾಗಿ ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವರದಿ: ಚಂದ್ರ ಹಾದನೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy