ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ಮಲ್ಲೇಶ್ವರ ಗ್ರಾಮದಲ್ಲಿ ತಡರಾತ್ರಿ 12 ರಿಂದ 1ಗಂಟೆ ಸಮಯದ ಒಳಗೆ ಕಳ್ಳರ ತಂಡವೊಂದು ಊರಿನ ಒಳಗೆ ನುಗ್ಗಿ ಅಕ್ಕಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಮನೆಯ ಪಕ್ಕದಲ್ಲಿದ್ದ ಕುರಿಗಳ ದೊಡ್ಡಿಯಲ್ಲಿ 16 ಕುರಿಗಳನ್ನು ಕದ್ದೊಯ್ದಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ಬಗ್ಗೆ ಕುರಿಗಳ ಮಾಲಿಕ ಮುದ್ದಪ್ಪ ಮಾತನಾಡಿ, ರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋಗಿದ್ದೆವು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ದರೋಡೆಕೋರರು ಅಕ್ಕ ಅಕ್ಕ ಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವಂತಹ 16 ಕುರಿಗಳನ್ನು ಕದ್ದೊಯ್ದಿದ್ದಾರೆ . ದಯಮಾಡಿ ಅಧಿಕಾರಿಗಳು ಕಳ್ಳರನ್ನು ಆದಷ್ಟು ಬೇಗ ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಬೇಡಿಕೊಂಡಿದ್ದಾರೆ.
ಸದ್ಯ ಈ ಪ್ರಕರಣ ಕೊರಟಗೆರೆ ಪೋಲಿಸ್ ಠಾಣೆಯ ಪಿ ಎಸ್ ಐ ಮಂಜುಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ .
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB