nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ
    ರಾಷ್ಟ್ರೀಯ ಸುದ್ದಿ August 19, 2022

    ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

    By adminAugust 19, 2022No Comments2 Mins Read
    manesh

    ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಕೇಂದ್ರ ಸಂಸ್ಥೆಗಳಿಂದ ಮತ್ತೊಂದು ಆಘಾತ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ, ದಿಲ್ಲಿ ಮತ್ತು ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

    ದಿಲ್ಲಿ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ. ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿರುವ ಮನೀಶ್ ಸಿಸೋಡಿಯಾ, ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.


    Provided by
    Provided by

    ಸಿಬಿಐ ನನ್ನ ಮನೆಗೆ ಬಂದಿದೆ. ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಇದರಿಂದ ಸತ್ಯ ಶೀಘ್ರವೇ ಹೊರಬೀಳಲಿದೆ. ಇದುವರೆಗೂ ನನ್ನ ವಿರುದ್ಧ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಏನೂ ಹೊರಬಂದಿಲ್ಲ. ಅವುಗಳಿಂದ ಯಾವ ಪ್ರಯೋಜನ ಕೂಡ ಆಗಿಲ್ಲ. ದೇಶಕ್ಕೆ ಉತ್ತದಿಲ್ಮಲಿ ಶಿಕ್ಷಣ ನೀಡುವ ನನ್ನ ಕೆಲಸವನ್ನು ತಡೆಯುವುದು ಸಾಧ್ಯವಿಲ್ಲ” ಎಂದು ಮನೀಶ್ ಟ್ವೀಟ್ ಮಾಡಿದ್ದಾರೆ.

    ದೇಶದಲ್ಲಿ ಒಳ್ಳೆಯ ಕೆಲಸ ಮಾಡಿದವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದಿಲ್ಲಿ ಸರ್ಕಾರ ಅದ್ಭುತ ಕೆಲಸ ಮಾಡಿರುವ ಕಾರಣಕ್ಕಾಗಿ ತೊಂದರೆ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ ಎರಡೂ ಇಲಾಖೆಗಳ ಸಚಿವರನ್ನು ಗುರಿ ಮಾಡಲಾಗುತ್ತಿದೆ. ಕೋರ್ಟ್‌ನಲ್ಲಿ ಸತ್ಯ ಹೊರಬರಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

    ಅಮೆರಿಕದ ಅತಿ ದೊಡ್ಡ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ದಿಲ್ಲಿಯ ಶಿಕ್ಷಣ ಮಾದರಿಯನ್ನು ಹೊಗಳಿದ ಮತ್ತು ಮನೀಶ್ ಸಿಸೋಡಿಯಾ ಅವರ ಚಿತ್ರ ಪ್ರಕಟಗೊಂಡ ದಿನವೇ, ಕೇಂದ್ರ ಸರ್ಕಾರವು ಮನೀಶ್ ಅವರ ಮನೆಗೆ ಸಿಬಿಐ ಅನ್ನು ಕಳುಹಿಸಿತ್ತು. ಸಿಬಿಐಗೆ ಸ್ವಾಗತ. ನಾವು ಸಂಪೂರ್ಣ ಸಹಕರಿಸುತ್ತೇವೆ. ಈ ಹಿಂದೆ ಕೂಡ ಅನೇಕ ದಾಳಿಗಳು ನಡೆದಿದ್ದರೂ, ಏನೂ ಸಿಕ್ಕಿರಲಿಲ್ಲ. ಈಗಲೂ ಏನೂ ಸಿಗುವುದಿಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ದಿಲ್ಲಿಯ ಶಿಕ್ಷಣ ಮತ್ತು ಆರೋಗ್ಯ ಮಾದರಿಯನ್ನು ಇಡೀ ಜಗತ್ತು ಚರ್ಚಿಸುತ್ತಿದೆ. ಅವರು ಅದನ್ನು ತಡೆಯಲು ಬಯಸಿದ್ದಾರೆ. ಈ ಕಾರಣಕ್ಕಾಗಿ ದಿಲ್ಲಿಯ ಆರೋಗ್ಯ ಮತ್ತು ಶಿಕ್ಷಣ ಸಚಿವರ ಮೇಲೆ ದಾಳಿಗಳು ಮತ್ತು ಬಂಧನಗಳು ನಡೆಯುತ್ತಿವೆ. 75 ವರ್ಷಗಳಲ್ಲಿ ಉತ್ತಮ ಕೆಲಸ ಮಾಡಲು ಪ್ರಯತ್ನಿಸಿದವರನ್ನೆಲ್ಲ ತಡೆಯಲಾಗಿತ್ತು. ಇದರಿಂದಾಗಿ ಭಾರತ ಹಿಂದೆ ಉಳಿದಿದೆ. ದಿಲ್ಲಿ ಸರ್ಕಾರ ಒಳ್ಳೆಯ ಕೆಲಸ ಮಾಡುವುದನ್ನು ತಡೆಯಲು ಬಿಡುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

    ದಿಲ್ಲಿ ಸರ್ಕಾರ ಸೆಪ್ಟೆಂಬರ್ 1ರಂದು ತನ್ನ ಹಳೆಯ ಅಬಕಾರಿ ನೀತಿಗೆ ಮರಳಿ ಹೋಗಲಿದೆ. ನೂತನ ಅಬಕಾರಿ ಕಾನೂನಿನ ವಿಚಾರವಾಗಿ ಭಾರಿ ವಿವಾದ ಸೃಷ್ಟಿಯಾಗಿದೆ. ಹಳೆಯ ಅಬಕಾರಿ ನೀತಿ ಅಡಿ ಯಾವುದೇ ಖಾಸಗಿ ವ್ಯಕ್ತಿಗಳು ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 1ರಿಂದ ದಿಲ್ಲಿ ಸರ್ಕಾರದ ಸಂಸ್ಥೆಗಳಿಗೆ ಮಾತ್ರ ಚಿಲ್ಲರೆ ಲಿಕ್ಕರ್ ಅಂಗಡಿಗಳನ್ನು ನಡೆಸಲು ಅವಕಾಶ ನೀಡಲಾಗುತ್ತದೆ.

    ನೂತನ ಅಬಕಾರಿ ನೀತಿಯಲ್ಲಿ, ದಿಲ್ಲಿ ಸರ್ಕಾರವು ರಾಜಧಾನಿಯಲ್ಲಿ ಲಿಕ್ಕರ್ ವ್ಯವಹಾರದಿಂದ ಹಿಂದಕ್ಕೆ ಸರಿದು, ಖಾಸಗಿ ವ್ಯಕ್ತಿಗಳು ಮಾರಾಟದಲ್ಲಿ ತೊಡಗಲು ಅವಕಾಶ ನೀಡಿತ್ತು. ಮದ್ಯ ಮಾರಾಟದ ವೇಳೆ ರಿಯಾಯಿತಿ, ಒನ್ ಪ್ಲಸ್ ಒನ್ ಆಫರ್‌ನಂತಹ ಕೊಡುಗೆಗಳನ್ನು ಪರಿಚಯಿಸಿತ್ತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ…

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.