ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ನಟರಾಜು ಎಂಬವರ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕಂಡು ಬಂದಂತೆ ಮನೆಯ ಮುಂದೆ ಪ್ರತ್ಯಕ್ಷವಾದ ಚಿರತೆ ಕೆಲಕಾಲ ಹೊಂಚು ಹಾಕಿ ನಿಂತಿದ್ದು, ನಾಯಿಯನ್ನು ಹೊತ್ತುಕೊಂಡು ಸಾಗಿದೆ.
ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆಯನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy