ಕೊರಟಗೆರೆ: ಪಟ್ಟಣದ 3 ನೇ ವಾರ್ಡ್‌ನ ಮನೆಯೊಂದರಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಚಾಮರಾಜು ಬಿನ್ ಲೇ ನಾಗಪ್ಪ, ಕುಂಭಾರ ಬೀದಿ ಕೊರಟಗೆರೆ ಟೌನ್ ಇವರ ಮನೆಯಲ್ಲಿ 8.280 ಲೀ. ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿದ ಮಧ್ಯವನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕಿ ಶ್ರೀಲತಾರವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಷ್ಣವಿ ಕುಲಕರ್ಣಿ ತಂಡ ಸ್ಥಳದಲ್ಲಿಯೇ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕಿ ವೈಷ್ಣವಿ ಕುಲಕರ್ಣಿ, ಸಿಬ್ಬಂದಿಗಳಾದ ಮಲ್ಲಿಕಾರ್ಜುನಮೊರಖಂಡಿ, ಮಂಜುಳ, ಮಧು ಇದ್ದರು.
ವರದಿ: ಸಿದ್ದರಾಜು ಟಿ.ಹೆಚ್.ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy