ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರಿನ ಹೇಮಾವತಿ ನಾಲಾ ಉಪವಿಭಾಗ ವ್ಯಾಪ್ತಿಯಲ್ಲಿರುವ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳ ಜಲಾಶಯವು ಭರ್ತಿಯಾಗಿದೆ.
ಜಿಲಾಶಯದ ಒಳ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುವ ಸಂಭವವಿದ್ದು, ಒಳ ಹರಿವಿಗೆ ತಕ್ಕಂತೆ ಜಲಾಶಯದಿಂದ ನೀರನ್ನು ಹೊರ ಬಿಡಲಾಗುವುದು. ಮಂಗಳ ಜಲಾಶಯದ ಕೆಳಭಾಗದ ಹಾಗೂ ನದಿ ಪಾತ್ರದ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಹೇಮಾವತಿ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296