ವಿಜಯಪುರ: ಮಂಗಳಮುಖಿಯೊಬ್ಬರನ್ನು ಇತರ ಆರೇಳು ಮಂಗಳಮುಖಿಯರು ಬೆತ್ತಲೆಗೊಳಿಸಿ ಅಮಾನವೀಯವಾಗಿ ಥಳಿಸಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ನಡೆದಿದೆ.
ಮಂಗಳಮುಖಿಯನ್ನು ಸುತ್ತುವರಿದ ಇತರ ಮಂಗಳಮುಖಿಯರು ನೆಲಕ್ಕೆ ಕೆಡವಿ ಹಲ್ಲೆ ನಡೆಸಿ, ಬಟ್ಟೆಯನ್ನು ಹರಿದು, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ, ಸೀರೆ ಎತ್ತಿ ಪ್ರದರ್ಶಿಸಿ, ಚಪ್ಪಾಳೆ ತಟ್ಟುತ್ತಾ ಅಸಭ್ಯ ಪದಗಳಿಂದ ನಿಂದಿಸುತ್ತಿರುವ ದೃಶ್ಯ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಹಲ್ಲೆಗೊಳಗಾದ ಮಂಗಳಮುಖಿ ಪರಿಪರಿಯಾಗಿ ಬೇಡಿಕೊಂಡರೂ ಬಿಡದ ತಂಡ ಹಲ್ಲೆ ನಡೆಸುತ್ತಾಲೇ ಇತ್ತು. ರಸ್ತೆಯಲ್ಲಿದ್ದ ಜನರು ಈ ದೃಶ್ಯವನ್ನು ಮೂಕಪ್ರೇಕ್ಷಕರಾಗಿ ನೋಡುತ್ತಿದ್ದರು.
ಯಾವ ಕಾರಣಕ್ಕಾಗಿ ಹಲ್ಲೆ ನಡೆದಿದೆ ಎನ್ನುವುದು ತಿಳಿದು ಬಂದಿಲ್ಲ, ಈವರೆಗೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


