ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರನೇ ಬಾರಿಗೆ ನೆತ್ತರು ಹರಿದಿದ್ದು, ಮಸೂದ್, ಪ್ರವೀಣ್ ಹತ್ಯೆಯ ಬಳಿಕ ಇದೀಗ 23 ವರ್ಚ ವಯಸ್ಸಿನ ಫಾಜಿಲ್ ಮಂಗಲಪೇಟೆ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ನಿನ್ನೆ ರಾತ್ರಿ 7:30ರ ಸುಮಾರಿಗೆ ಸುರತ್ಕಲ್ ನ ನಗರ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಮಾರಣಾಂತಿಕ ಹಲ್ಲೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ಪಾಜಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುರತ್ಕಲ್‌ನ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ರಾತ್ರಿಯಿಂದಲೇ ನಿರಂತವಾಗಿ ಗಸ್ತು ತಿರುಗುತ್ತಿದ್ದಾರೆ. ಯಾವುದೇ ಗಲಭೆಯಾಗದಂತೆ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz