ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಕೆ.ಎಸ್ ರಾವ್ ರೋಡ್ ಬಳಿಯ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.
ಮೈಸೂರು ಮೂಲದ ದೇವೇಂದ್ರಪ್ಪ, ಪತ್ನಿ ನಿರ್ಮಲಾ, ಮಕ್ಕಳಾದ ಚೈತ್ರ, ಚೈತನ್ಯ ಆತ್ಮಹತ್ಯೆಗೆ ಶರಣಾದವರು. ದೇವೇಂದ್ರಪ್ಪ ಮೈಸೂರಿನ ವಾಣಿವಿಲಾಸ ಬಡಾವಣೆಯ ನಿವಾಸಿಯಾಗಿದ್ದು ಪತ್ನಿ ಮಕ್ಕಳ ಜೊತೆ ಮಂಗಳೂರಿಗೆ ತೆರಳಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು.
ಈ ನಡುವೆ ಹೆಂಡತಿ ಮತ್ತು ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟಿದ್ದು , ಸಾಲಗಾರರ ಒತ್ತಡ ತಡೆಯಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


