ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆರೋಪಿಯ ಮೊಣಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx