ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮಧ್ಯರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ಮುಸ್ಲಿಮ್ ಯುವಕರೊಂದಿಗೆ ತಿರುಗಾಡುತ್ತಿದ್ದ ಹಿಂದೂ ಯುವತಿಯರನ್ನು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ಇಲ್ಲಿ ಏನು ಮಾಡುತ್ತಿದ್ದೀರಿ ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ಹೊಟೇಲ್‌ಗೆ ಊಟಕ್ಕೆ ಬಂದಿರೋದಾಗಿ ಜೋಡಿಗಳು ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಬಳಿಕ ಜೋಡಿ ಪೊಲೀಸ್ ಠಾಣೆಗೆ ತೆರಳಿದ್ದು, ವಿಚಾರಣೆಯ ಬಳಿಕ ಮನೆಗೆ ಕಳುಹಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz