ಮಂಗಳೂರು ಆಟೋದಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್ ಜೊತೆ ಸಂಪರ್ಕದಲ್ಲಿದ್ದ ಮೂವರನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ .
ಶನಿವಾರ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಟೋ ಚಾಲಕ ಮತ್ತು ಮತ್ತೋರ್ವ ಗಾಯಗೊಂಡಿದ್ದರು. ಈ ಇಬ್ಬರ ಪೈಕಿ 24 ವರ್ಷದ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ ಕೂಡ ಒಬ್ಬನಾಗಿದ್ದು ಈತನನ್ನ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳು ಶಾರೀಕ್ ನ ಗುರುತನ್ನ ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ಗುರುತು ಪತ್ತೆ ಹಚ್ಚುವ ಸಲುವಾಗಿ ಶಾರಿಕ್ ಸಹೋದರಿ ಮತ್ತು ಚಿಕ್ಕಮ್ಮನನ್ನ ಪೊಲೀಸರು ಕರೆತಂದಿದ್ದರು. ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರಿಕ್ ಮಂಗಳೂರಿನ ಪಂಪ್ ವೆಲ್ ಬಳಿ ಇಳಿದಿದ್ದನು. ನಂತರ ಅಲ್ಲಿಂದ ಬೇರೆಡೆ ಆಟೋದಲ್ಲಿ ತೆರಳುವಾಗ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


