ಇಂಪಾಲ: ಹಿಂಸಾಪೀಡಿತ ಮಣಿಪುರದಲ್ಲಿ ಗಲಭೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ವರದಿಗಳು ಪ್ರಕಟವಾಗಿತ್ತು. ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಮಣಿಪುರ ಸರ್ಕಾರದ ವಕ್ತಾರರು ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ರಾಜೀನಾಮೆ ಸಲ್ಲಿಸಲು ಬಿರೇನ್ ಸಿಂಗ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ್ದರು. ಆ ಸಮಯದಲ್ಲಿ ಅವರ ರಾಜೀನಾಮೆ ಪತ್ರವನ್ನು ಬೆಂಬಲಿಗರು ಹರಿದುಹಾಕಿದ್ದಾರೆ.ಮುಖ್ಯಮಂತ್ರಿಯವರು ಅಧಿಕಾರದಿಂದ ಕೆಳಗಿಳಿಯಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸದೇ ಇರಲು ನಿರ್ಧಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಲೀಮಾಖೋಂಗ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯ ಹಿನ್ನಲೆಯಲ್ಲಿ ನಿನ್ನೆ ಸಂಜೆ ಮೈತೆಯ್ ಬುಡಕಟ್ಟು ಸಮುದಾಯಕ್ಕೆಸೇರಿದ ವ್ಯಕ್ತಿಯ ಶವವನ್ನು ಇಂಫಾಲ್‌ಗೆ ಕರೆತರಲಾಯಿತು.ಈ ವೇಳೆ ಮೃತದೇಹಕ್ಕೆ ಗೌರವ ಸಲ್ಲಿಸಲು ನೆರೆದಿದ್ದ ಜನರು ಪ್ರತಿಭಟಿಸಿದ್ದು ಆ ಸಮಯದಲ್ಲಿ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ, ಪ್ರತಿಭಟನಾಕಾರರು ಮೇಲೆ ಮಣಿಪುರ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿದರು.
‘ನಿನ್ನೆಯ ಘಟನೆಯ ನಂತರ ಮುಖ್ಯಮಂತ್ರಿಗಳು ತುಂಬಾ ಭಾವುಕರಾಗಿದ್ದರು. ವಿಶೇಷವಾಗಿ ಅವರ ರಾಜೀನಾಮೆಗೆ ಒತ್ತಡ ಹೇರಲಾಗಿತ್ತು. ಜನರು ಅವರ ವಿರುದ್ಧ ಸಾಕಷ್ಟು ಘೋಷಣೆಗಳನ್ನು ಕೂಗುತ್ತಿದ್ದರು. ಜನರ ನಂಬಿಕೆ ಕಳೆದುಕೊಂಡಿದ್ದೇ ಆದಲ್ಲಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಅದೇ ಅವರ ರಾಜೀನಾಮೆ ನಿರ್ಧಾರಕ್ಕೆ ಪ್ರೇರೇಪಿಸಿತು’ ಎಂದು ಸಚಿವ ಸಪಂ ರಂಜನ್ ಸಿಂಗ್ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


