ಮಣಿಪುರದ ಮೊರೆಹ್ ನಲ್ಲಿ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೊರೆಹ್ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಚಿಂಗ್ತಮ್ ಆನಂದ್ ಗಡಿ ಪಟ್ಟಣದ ಪೂರ್ವ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಹೆಲಿಪ್ಯಾಡ್ ಅನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಆನಂದ್ ಕರ್ತವ್ಯದಲ್ಲಿದ್ದಾಗ ಮುಂಜಾನೆ ಈ ಘಟನೆ ಸಂಭವಿಸಿದೆ. ಇಂಡೋ-ಮ್ಯಾನ್ಮಾರ್ ಗಡಿಯ ಬಳಿ ಆತನ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಈ ಪ್ರದೇಶವು ಆಗಾಗ್ಗೆ ಬಂಡಾಯ ಚಟುವಟಿಕೆಗಳಿಂದ ಹಾನಿಗೊಳಗಾಗುತ್ತದೆ.
ಆನಂದ್ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಗ್ರರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.


