ಮೇಘಾಲಯದ ತುರಾದಲ್ಲಿ ಭೂಕಂಪ. ಭೂಕಂಪನವು ರಿಕ್ಟರ್ ಮಾಪಕದಲ್ಲಿ 3.7 ರಷ್ಟಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ತುರಾದಿಂದ ಉತ್ತರಕ್ಕೆ 6.57 59 ಕಿಮೀ ದೂರದಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪದ ಆಳ 29 ಕಿಮೀ ಎಂದು ವರದಿಯಾಗಿದೆ.
ಮಂಗಳವಾರ ಈಶಾನ್ಯ ಪ್ರದೇಶದಲ್ಲಿ ವರದಿಯಾದ ಎರಡನೇ ಭೂಕಂಪ ಇದಾಗಿದೆ. ಇದಕ್ಕೂ ಮೊದಲು ಮಣಿಪುರದ ನೋನಿ ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪನದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ಬೆಳಗಿನ ಜಾವ 2.46ರ ಸುಮಾರಿಗೆ 25 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


