ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.
ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆ ಸಿಸೋಡಿಯಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಸಿಸೋಡಿಯ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ್ದ ಹಿನ್ನೆಲೆ ಕೋರ್ಟ್ ಇಂದು ನ್ಯಾಯಾಂಗ ಬಂಧನ ವಿಸ್ತರಿಸಿದೆ. 2023ರ ಫೆಬ್ರವರಿ 26 ರಿಂದ ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇ.ಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಸಹ ಬಂಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


