ನವದೆಹಲಿ: ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಶನಿವಾರ ದೆಹಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಗುರುವಾರ ರಾತ್ರಿಯೇ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರ್ಕಾರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
ರಜೆ ಘೋಷಣೆ :
ಬೆಂಗಳೂರು ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು ಶುಕ್ರವಾರ ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx