ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಅವರ ಅಂತ್ಯ ಸಂಸ್ಕಾರವನ್ನು ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಿರ್ಮಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಪ್ರಧಾನಿ ಸಿಂಗ್ ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದಾರೆ. ಅವರ ಸ್ಮಾರಕ ಸ್ಥಾಪಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ ಬಳಿಕ, ಖರ್ಗೆ ಪ್ರಧಾನಿಗೆ ಪತ್ರ ಬರೆದಿದ್ದು, ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx