ಕೆ.ಆರ್.ಪೇಟೆ: ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಮನೆಯೊಂದು ಆಹುತಿಯಾಗಿರುವ ಸ್ಥಳಕ್ಕೆ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಅವರು ಗ್ರಾಮಕ್ಕೆ ಭೇಟಿ ಕೊಟ್ಟ ಸಾಂತ್ವನ ಹೇಳಿ ಧನಸಹಾಯ ನೀಡಿದರು.
ತಾಲ್ಲೂಕು ಸಂತೆಬಾಚಹಳ್ಳಿ ಹೋಬಳಿ ಹರಿಯಾಲದಮ್ಮ ದೇವಸ್ಥಾನ ಮಾರೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯು ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ.
ಮನೆಯ ಬೀರುವಿನಲ್ಲಿದ್ದ 1ಲಕ್ಷದ 80 ಸಾವಿರ ನಗದು ಹಣ, 90 ಗ್ರಾಂ ಚಿನ್ನ,50ಗ್ರಾಂ ಬೆಳ್ಳಿ ಹಾಗೂ ಬಟ್ಟೆಬರೆಗಳು,ಜಮೀನು ಸಂಬಂಧಿಸಿದ ರೆಕಾರ್ಡ್ಸ್‌ಗಳು,ಅಂಗವಿಕಲರ ಪ್ರಮಾಣ ಪತ್ರಗಳು ಸೇರಿದಂತೆ ಮನೆಯಲ್ಲಿದ್ದ ಪಾತ್ರೆಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡರು.
ಯಲಾದಹಳ್ಳಿ ಗ್ರಾಮದ ಮೂರ್ತಿ ಶಾರದಮ್ಮ ಅವರು ಮಾರೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ದಂಪತಿಗಳಿಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಪಯಣ ಬೆಳೆಸಿದ್ದ ಸಂದರ್ಭದಲ್ಲಿ ಈ ಘಟನೆಯು ಸಂಭವಿಸಿದೆ.
ಘಟನೆಯ ಸ್ಥಳಕ್ಕೆ ವಿಷಯ ತಿಳಿದ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಆಗಮಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ಧನ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದರು.
ಈ ಸಂದರ್ಭದಲ್ಲಿ ಫಾರಂ ಚಂದ್ರು,ಧರ್ಮ,ಅಜಯ್,ಅಶೋಕ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4