ಚಾಮರಾಜನಗರ: ಕೆಪಿಸಿಸಿ ಕಾರ್ಯಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ್ ತಮ್ಮ ಹುಟ್ಟೂರಿನ ಜನ್ಮದಾತರ ಸಮಾಧಿಯ ಬಳಿಯೇ ಮಣ್ಣಲ್ಲಿ ಮಣ್ಣಾದರು.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಎರಡು ಭಾರಿ ಸಂಸದರಾಗಿ ಜನ ಮನ್ನಣೆ ಪಡೆದಿದ್ದ ಆರ್. ಧ್ರುವನಾರಾಯಣ್ ಅವರು ಶನಿವಾರ ಬೆಳಗ್ಗೆ ಮೈಸೂರಿನ ಸ್ವಗೃಹದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗದ ಮಧ್ಯೆ ಮೃತಪಟ್ಟಿದ್ದರು.
ಅವರ ಅಂತ್ಯಕ್ರಿಯೆ ಕುಟುಂಬದರ ಬಯಕೆಯಂತೆ ಹುಟ್ಟೂರಾದ ಚಾಮರಾಜನಗರ ತಾಲ್ಲೂಕಿನ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ನೇರವೇರಿತು.
ಸಾವಿರಾರು ಅಭಿಮಾನಿಗಳು, ಬಂಧು ಬಳಗದವರ ಸಮ್ಮುಖದಲ್ಲಿ ಧ್ರುವನಾರಾಯಣ್ ಅವರ ಅಂತ್ಯಕ್ರಿಯೆ ನೆರವೇರಿತು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ದೃವ ಧಾರ್ಮಿಕ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಿದರು. ಜನ್ಮದಾತರ ಸಮಾಧಿಯ ಬಳಿ ಆರ್. ಧ್ರುವನಾರಾಯಣ್ ಅಜರಾಮರರಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


