nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    ಜಿಲ್ಲಾ ಸುದ್ದಿ November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    By adminNovember 9, 2025No Comments3 Mins Read
    tiger

    ಸರಗೂರು: ತಾಲೂಕಿನ ಮೊಳೆಯೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ರೈತರೊಬ್ಬರನ್ನು ಬಲಿ ಪಡೆದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದ ಗಂಡು ಹುಲಿಯನ್ನು ಹೊಸಕೋಟೆ ಗ್ರಾಮದ ಟ್ರಂಚ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ಸಂಜೆ ಯಶಸ್ವಿಯಾಗಿ ಸೆರೆಯಾಗಿದೆ.

    ತಾಲೂಕಿನಲ್ಲಿ ಒಂದು ತಿಂಗಳಿಂದ ಜನರ ನಿದ್ದೆಗೆಡಿಸಿದ ನರಭಕ್ಷಕ ಹುಲಿ ಕಳೆದ ವಾರ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ ಎಂಬ ರೈತನ ಮೇಲೆ ದಾಳಿ ಮಾಡಿ ಕೊಂದಿದ್ದ ಸುಮಾರು 9 ವರ್ಷದ ಈ ಹುಲಿಯನ್ನು ಪತ್ತೆಹಚ್ಚಲು ಅರಣ್ಯ ಇಲಾಖೆಯು ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಶನಿವಾರ ಸಂಜೆ ಮೊಳೆಯೂರು ವಲಯದಲ್ಲಿ ಹುಲಿಯ ಇರುವಿಕೆಯನ್ನು ಖಚಿತಪಡಿಸಿಕೊಂಡ ಸಿಬ್ಬಂದಿ, ಅದಕ್ಕೆ ಅರವಳಿಕೆ ಮದ್ದು ನೀಡಿ ಪ್ರಜ್ಞೆ ತಪ್ಪಿಸಿ, ಬೋನಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸೆರೆಸಿಕ್ಕ ಹುಲಿಯ ಕುತ್ತಿಗೆಯ ಭಾಗದಲ್ಲಿ ಆಳವಾದ ಗಾಯವಾಗಿದ್ದು, ಬಹುಶಃ ಉರುಳಿಗೆ ಸಿಲುಕಿ ಈ ಗಾಯವಾಗಿರಬಹುದು ಎಂದು ಶಂಕಿಸಲಾಗಿದೆ. ಗಾಯದಿಂದಾಗಿ ಬೇಟೆಯಾಡುವ ಶಕ್ತಿಯನ್ನು ಕಳೆದುಕೊಂಡಿದ್ದ ಹುಲಿಯು, ಸುಲಭವಾಗಿ ಆಹಾರ ಸಂಪಾದಿಸಲು ಜಾನುವಾರು ಮತ್ತು ಮನುಷ್ಯರ ಮೇಲೆ ದಾಳಿ ಮಾಡಲು ಆರಂಭಿಸಿತ್ತು.

    ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಹುಲಿ ದಾಳಿ ಹೆಚ್ಚಾಗಿದ್ದು, ಮೂವರು ರೈತರು ಪ್ರಾಣ ಕಳೆದುಕೊಂಡಿದ್ದು, ಓರ್ವ ಶಾಶ್ವತ ಅಂಗ ವೈಫಲ್ಯಕ್ಕೆ ತುತ್ತಾಗಿದ್ದಾರೆ. ಈ ನಡುವೆ ಅರಣ್ಯ ಇಲಾಖೆ ಮೂರು ಹುಲಿಗಳನ್ನು ಸೆರೆ ಹಿಡಿದಿದ್ದು, ಶನಿವಾರ ತಡರಾತ್ರಿಯೂ 10 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

    ಹುಲಿಯ ಕುತ್ತಿಗೆ ಭಾಗದಲ್ಲಿ ಉರುಳಿಗೆ ಸಿಲುಕಿ ಗಂಭೀರ ಗಾಯವಾಗಿದೆ. ಹೀಗಾಗಿ ಹುಲಿ ಗಾಯಗೊಂಡು ಬೇಟೆಯಾಡುವ ಸಾಮರ್ಥ್ಯ ಕಳೆದುಕೊಂಡು, ಬಳಿಕ ಕಾಡಂಚಿಗೆ ಬಂದು ರೈತರ ಮೇಲೆ ದಾಳಿ ಮಾಡಿದೆ ಎನ್ನಲಾಗಿದ್ದು, ಪರೀಕ್ಷೆಯ ನಂತರ ದೃಢಪಡಿಸಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಶುಕ್ರವಾರ ಹಳೆಹೇಗ್ಗುಡಿಲು ಗ್ರಾಮದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಚೌಡ ನಾಯಕ ಎಂಬವರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು.   ಇದರಿಂದ ಆಕ್ರೋಶಗೊಂಡ ರೈತರು ಹುಲಿ ಸೆರೆಗೆ ಪಟ್ಟು ಹಿಡಿದರು. ಕೂಡಲೇ ಅರಣ್ಯ ಇಲಾಖೆ ಹಗಲು ರಾತ್ರಿ ಎನ್ನದೇ ಸುಮಾರು 100ಕ್ಕೂ ಅಧಿಕ ಸಿಬ್ಬಂದಿ ಸಾಕಾನೆಗಳಾದ ಭೀಮಾ, ಮಹೇಂದ್ರ, ಅಭಿಮನ್ಯು, ಲಕ್ಷ್ಮಣ, ಶ್ರೀಕಂಡ ಮೂಲಕ ಕೂಂಬಿಂಗ್ ಆರಂಭಿಸಿ, ಕೂಡಗಿಯಿಂದ ಸುಮಾರು 4 ಕಿ.ಮೀ. ದೂರದ ಹೊಸಕೋಟೆ ಬಳಿ ಅರಣ್ಯದ ಗಡಿಯ ಟ್ರಂಚ್ ನಲ್ಲಿ ಹುಲಿ ಇರುವ ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಶುವೈದ್ಯರಾದ ಡಾ.ರಮೇಶ್, ಡಾ.ವಸೀಂ ಮಿರ್ಜಾ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಉರುಳಿಗೆ ಸಿಲುಕಿ ಹುಲಿಗೆ ಗಾಯ:

    ಇನ್ನು ಸೆರೆಯಾದ ಹುಲಿಯ ಕುತ್ತಿಗೆ ಭಾಗ ಮತ್ತು ಕಾಲಿನಲ್ಲಿ ಗಂಭೀರ ಗಾಯಗಳಾಗಿದ್ದು, ಹುಲಿ ಸೆರೆಯಾದ ಸಂದರ್ಭದಲ್ಲಿ ಕುತ್ತಿಗೆಯಲ್ಲಿ ಉರುಳು ಇತ್ತು ಎನ್ನಲಾಗಿದೆ. ಸ್ಥಳದಲ್ಲಿಯೇ ಉರುಳು ತೆಗೆದು ಬಳಿಕ ಹುಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಮೈಸೂರಿನ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಹುಲಿ ಕಾರ್ಯಾಚರಣೆ ನಡೆಸುವಾಗ ಡ್ರೋನ್ ಕಾಮೆರಾದಲ್ಲಿ ಚಲನವಲನ ಪತ್ತೆಯಾಗಿತ್ತು.‌ ಅದನ್ನು ಆಧರಿಸಿ ಸೆರೆ ಹಿಡಿಯಲಾಗಿದೆ. ಅದಕ್ಕೆ ಕತ್ತು ಮತ್ತು ಕಾಲಿನ ಭಾಗದಲ್ಲಿ ಗಾಯವಾಗಿದೆ ಎನ್ನಲಾಗಿದೆ ಎಂದು ಅರಣ್ಯ ಇಲಾಖೆ  ಎಸಿಎಫ್ ಡಿ ಪರಮೇಶ್ ತಿಳಿಸಿದ್ದಾರೆ.

    ಡಿಎನ್ ಎ ಪರೀಕ್ಷೆಗೆ ಆದೇಶ:

    ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದ್ದು, ಹುಲಿಯ ಡಿಎನ್.ಎ. ಪರೀಕ್ಷೆ ನಡೆಸಿ ಅದೇ ಹುಲಿಯೇ ಎಂದು ಖಚಿತ ಪಡಿಸಿಕೊಳ್ಳಲೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

    ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿ.ಎನ್.ಎ. ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮುಂದುವರಿದಂತೆ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರಿಗೆ ಹುಲಿ ಸಂಚಾರವಿರುವ ವಸತಿ ಪ್ರದೇಶಗಳ ಬಳಿ ಇದ್ದು, ಈ ಬೇರೆ ಹುಲಿಗಳ ಸಂಚಾರವಿದ್ದರೆ ಪರಿಶೀಲನೆ ನಡೆಸಿ ಕಾರ್ಯಾಚರಣೆ ಮಾಡಲು ಸೂಚಿಸಿದ್ದಾರೆ.

    ಈ ಸಂದರ್ಭದಲ್ಲಿ ಡಿಸಿಎಫ್ ಪರಮೇಶ್, ಸಿಸಿಎಫ್ ಪ್ರಭಾಕರನ್, ಎಸಿಎಫ್ ಡಿ ಪರಮೇಶ್, ಆರ್ ಎಫ್ಓ ವಿವೇಕ್, ಇನ್ನೂ ಅಧಿಕಾರಿಗಳು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ತುಮಕೂರು: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು…

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.