nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026
    Facebook Twitter Instagram
    ಟ್ರೆಂಡಿಂಗ್
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    • ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
    • ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂತ್ರಾಲಯದ ರಾಯರ ಸನ್ನಿದಿಯಲ್ಲಿ 2023ರ ಚುನಾವಣಾ ಕುರಿತು ಭವಿಷ್ಯ ನುಡಿದ ಬಿಎಸ್ವೈ
    ರಾಜ್ಯ ಸುದ್ದಿ August 11, 2022

    ಮಂತ್ರಾಲಯದ ರಾಯರ ಸನ್ನಿದಿಯಲ್ಲಿ 2023ರ ಚುನಾವಣಾ ಕುರಿತು ಭವಿಷ್ಯ ನುಡಿದ ಬಿಎಸ್ವೈ

    By adminAugust 11, 2022No Comments2 Mins Read
    yadiurappa

    ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಬೊಮ್ಮಾಯಿ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಗುಸುಗುಸು ಹಬ್ಬಿರುವ ಸಂದರ್ಭದಲ್ಲೇ ಸ್ಪಷ್ಟನೆ ನೀಡಿರುವ ಅವರು ಹಾಲಿ ಮುಖ್ಯಮಂತ್ರಿ ನಾಯಕ್ವದಲ್ಲೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ನನಸಾಗುವುದಿಲ್ಲ ಎಂದರು.


    Provided by
    Provided by

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. 2022 ಆಗಸ್ಟ್ 21ರಿಂದ ರಾಜ್ಯದ ಎಲ್ಲೆ ಕಡೆ ಪ್ರವಾಸ ಹಮ್ಮಿಕೊಳ್ಳಲಾಗುವುದು. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಹುಡುಕಿ ಕೆಲಸ ಮಾಡಲು ಹೈಕಮಾಂಡ್ ಸೂಚನೆ ನೀಡಿದ್ದು, ಪ್ರವಾಸದ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.
    ಇತ್ತೀಚಿಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಜತೆ ಚರ್ಚೆ ವೇಳೆ ರಾಜ್ಯ ರಾಜಕೀಯ ವಿದ್ಯಮಾನದ ಕುರಿತು ವಿಷಯ ಮಂಡನೆ ಮಾಡಲಾಗಿದೆ. ಸಾಮೂಹಿಕ ನೇತೃತ್ವದಲ್ಲೇ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು. ನಾನು ರಾಜೀನಾಮೆ ಕೊಟ್ಟ ನಂತರವೇ ಸಿಎಂ ಆಯ್ಕೆ ಆಗಿದೆ. ನನಗೆ ಪಕ್ಷ ಎಲ್ಲ ರೀತಿಯ ಗೌರವ ನೀಡಿದೆ. ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ. ಆ ಋಣ ತೀರಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

    ಬಿಹಾರದ ಸಿಎಂ ನಿತೀಶ್‍ಕುಮಾರ್ ಅನೇಕ ಸಲ ಮೈತ್ರಿ ಮಾಡಿಕೊಂಡು ನಂತರ ಕೈ ಬಿಟ್ಟಿದ್ದಾರೆ. ಈ ರೀತಿಯ ವಿದ್ಯಮಾನಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಕೆಟ್ಟ ಪರಿಣಾಮ ಆಗದು. ಮುಂದೆಯೂ ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

    ಶಿಕಾರಿಪುರದಿಂದ ಪುತ್ರ ವಿಜಯೇಂದ್ರನಿಗೆ ಅವಕಾಶ ನೀಡುವಂತೆ ಕೇಳಿದ್ದೇನೆ. ಕೇಂದ್ರ ಒಪ್ಪಿದರೆ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆಗೆ ಅವಕಾಶ ಸಿಗಲಿದೆ ಎಂದರು.

    ಕಾಂಗ್ರೆಸ್ ಆರೋಪ ಶುದ್ಧ ಸುಳ್ಳು: ಕಾಂಗ್ರೆಸ್ ಪಕ್ಷವು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾಡಿರುವ ಆರೋಪ ಶುದ್ಧ ಸುಳ್ಳು. ಕೆಲವೊಂದು ಸಮಸ್ಯೆಗಳಿದ್ದು ಪರಿಹರಿಸಿಕೊಂಡು ಮುಂದುವರಿಯಲಿದ್ದೇವೆ. ಕೇಂದ್ರ ನಾಯಕರ ತೀರ್ಮಾನದಿಂದಲೇ ಆಯಾ ಜಿಲ್ಲೆಯ ಸಚಿವರನ್ನು ಆಯಾ ಜಿಲ್ಲೆಗಳಿಗೆ ಸಚಿವರಾಗಿ ನೇಮಿಸಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲು ಬಿಜೆಪಿ ಅವಕಾಶ ನೀಡಲ್ಲ ಎಂದು ಸಮರ್ಥಿಸಿಕೊಂಡರು.

    ಇಡಿ, ಸಿಐಡಿ ಸೇರಿ ಯಾವುದೇ ತನಿಖಾ ಸಂಸ್ಥೆಯ ಬಗ್ಗೆ ಕಾಂಗ್ರೆಸ್‍ನವರು ಭಯ ಬೀಳಬೇಕಿಲ್ಲ. ತಪ್ಪು ಮಾಡಿರದಿದ್ದರೆ ಕಾಂಗ್ರೆಸ್‍ನವರು ಆತಂಕಪಡಬೇಕಿಲ್ಲ. ಸಂಪುಟ ವಿಸ್ತರಣೆಯ ಮೂಲಕ ಸಿಎಂ ಎಲ್ಲ ಪ್ರದೇಶಕ್ಕೆ ಪ್ರಾಶಸ್ತ್ಯ ನೀಡಲಿದ್ದಾರೆ. ಮನೆ ಮನೆ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ಟೀಕೆ ಸಲ್ಲದು ಎಂದರು.

    ಆ.21 ರಿಂದ ರಾಜ್ಯಾದ್ಯಂತ ಪ್ರವಾಸದ ಬಗ್ಗೆ ಸಭೆ ನಡೆಸಿ ಸ್ಥಳ ಶೀಘ್ರ ನಿಗದಿ ಮಾಡಲಾಗುವುದು ಎಂದರು. ಮಕ್ಕಳಿಗೆ ಹೆಸರಿಟ್ಟ ಪ್ರಸಂಗ ಹೇಳಿದ ಬಿಎಸ್‍ವೈ ನಾನು ಯಾವುದೇ ಕೆಲಸ ಆರಂಭ ಮಾಡುವ ಮುನ್ನ ಗುರು ರಾಘವೇಂದ್ರ ಸ್ಮರಿಸಿ ಮಾಡುವ ಪರಿಪಾಠವಿದೆ.

    ಈ ಹಿಂದೆ ನನಗೆ ಸ್ವಪ್ನದಲ್ಲಿ ಬಂದು ರಾಯರು ಅನುಗ್ರಹಿಸಿದ್ದರು. ರಾಯರ ಸ್ವಪ್ನದಲ್ಲಿ ಬಂದ ಮೇಲೆ ದೊಡ್ಡ ಮಗನಿಗೆ ರಾಘವೇಂದ್ರ ಎಂದು ಹೆಸರಿಡಲಾಗಿತ್ತು. ಮಂತ್ರಾಲಯದ ವಿಜಯತೀರ್ಥದಲ್ಲಿ ಪತ್ನಿ ಸಮೇತ ಕೆಲ ದಿನ ತಂಗಿದ್ದೆ. ಅದಾದ ಮೇಲೆ ಎರಡನೇ ಮಗ ಜನಿಸಿದ್ದರಿಂದ ವಿಜಯೇಂದ್ರ ಎಂದು ಹೆಸರಿಡಲಾಗಿತ್ತು. ಗುರುಗಳ ಆರಾಧನೆ ಶುಭ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಬಂದಿರುವುದು ಬಹಳ ಖುಷಿ ಕೊಟ್ಟಿದೆ ಎಂದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ತುಮಕೂರು: ಡಾ. ಜಿ.ಎಸ್. ಸಿದ್ದಲಿಂಗಯ್ಯನವರ ಬದುಕು-ಬರಹ ವಿಚಾರ ಸಂಕಿರಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಮಾರಂಭವನ್ನು…

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.