ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದ ಮೇಲೂ ಸಚಿವ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನೇರವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕ್ಲೀನ್ ಚಿಟ್ ಸಿಕ್ಕಿದರೂ ಮಂತ್ರಿಗಿರಿ ಸಿಗದಿದ್ದಕ್ಕೆ ಅಸಮಾಧಾನವಿದೆ. ಹೀಗಾಗಿ ನಾನು ಸದನಕ್ಕೆ ಹೋಗುತ್ತಿಲ್ಲ. ಮುಚ್ಚುಮರೆ ಇಲ್ಲದೇ ಹೇಳತ್ತೀನಿ ಎಂದರು.
ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಕೇಂದ್ರದ ನಾಯಕರಿಗೆ ಬಿಟ್ಟಿದ್ದು ನನಗೆ ಕ್ಲೀನ್ ಚಿಟ್ ನೀಡಿದ ಮೇಲೂ ಸಚಿವ ಸ್ಥಾನ ನೀಡಲು ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy