ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳ ಮರು ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೀಕ್ಷೆಯ ಭಾಗವಾಗಿ ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಗುಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ ಹಾಗೂ ಶೌಚಾಲಯದ ಮಲದ ಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಯಾವುದೇ ವ್ಯಕ್ತಿಗಳಿದ್ದಲ್ಲಿ ಈ ಪತ್ರಿಕಾ ಪ್ರಕಟಣೆ ಪ್ರಕಟಣೆಯಾದ ದಿನಾಂಕದಿಂದ 10 ದಿನಗಳೊಳಗಾಗಿ ಕೊರಟಗೆರೆ ಪಟ್ಟಣ ಪಂಚಾಯತಿ ಆರೋಗ್ಯ ಶಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ನೋಂದಣಿಗಾಗಿ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಭಾವಚಿತ್ರ(6*4 ಅಳತೆ), ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಮುಖಪುಟದ ಪ್ರತಿ(ಮೂಲ ಪುಸ್ತಕ ತರಬೇಕು), ಆಧಾರ್ ಕಾರ್ಡ್(ಮೂಲ ಪ್ರತಿ ತರಬೇಕು), ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರವನ್ನು ಹಾಜರುಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q