ಸರಗೂರು: ಭಾರತೀಯ ಜನತಾ ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷರಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕಿನ ಮನುಗನಹಳ್ಳಿಯ ಎಂ.ಪಿ. ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಯುವಿಜಯೇಂದ್ರ ಅವರ ಸೂಚನೆ ಮೇರೆಗೆ, ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, “ಎಂ.ಪಿ. ಮಂಜುನಾಥ್ ಅವರ ಪಕ್ಷದ ಸಂಘಟನಾ ನಿಷ್ಠೆ, ತತ್ವ-ಸಿದ್ಧಾಂತಗಳ ಮೇಲಿನ ಬದ್ಧತೆ ಹಾಗೂ ಕ್ಷೇತ್ರದಲ್ಲಿ ಅವರು ನಿರಂತರವಾಗಿ ನಡೆಸಿಕೊಂಡು ಬಂದಿರುವ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ,” ಎಂದು ತಿಳಿಸಿದರು. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪಯಣ ಆರಂಭಿಸಿದ ಮಂಜುನಾಥ್ ಅವರು ಇಂದು ಜಿಲ್ಲಾ ಮಟ್ಟದ ಪ್ರಮುಖ ಹುದ್ದೆಗೆ ತಲುಪಿರುವುದು ಇತರ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ತಮಗೆ ದೊರೆತಿರುವ ಹೊಸ ಜವಾಬ್ದಾರಿಯ ಬಗ್ಗೆ ಮಾತನಾಡಿದ ನೂತನ ಉಪಾಧ್ಯಕ್ಷ ಎಂ.ಪಿ. ಮಂಜುನಾಥ್, “ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು, ಪಕ್ಷದ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರ ಮನೆಮನೆಗೆ ತಲುಪಿಸುವುದು ಹಾಗೂ ಯುವಕರನ್ನು ಪಕ್ಷದತ್ತ ಆಕರ್ಷಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಅವರು ತಮಗೆ ಈ ಅವಕಾಶ ನೀಡಿದ ಪಕ್ಷದ ವರಿಷ್ಠರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




