ತಿಪಟೂರು: ತಾಲೂಕು ಹೊನವಳ್ಳಿ ಹೋಬಳಿ ಪಟ್ರೆ ಹಳ್ಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಾಲಯ ಪ್ರಾರಂಭ ಸಮಾರಂಭ ನಡೆಯಿತು.
ಸಾನಿಧ್ಯ ವಹಿಸಿದ್ದ ಸಿರಿಗೆರೆ ತರಳಬಾಳು ಬೃಹನ್ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮನುಷ್ಯ ನಾಗಿ ಹುಟ್ಟಿದಮೇಲೆ ಒಳ್ಳೆಯ ಮನಸ್ಸಿನಿಂದ ಒಳ್ಳೆ ಒಳ್ಳೆ ಕೆಲಸ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಮನುಷ್ಯ ಮೊದಲು ದೂಷಿಸುವ ಗುಣವನ್ನು ಮೊದಲು ಬಿಡಬೇಕು. ನಾನು ಸರಿಯಾಗಿ ಇದ್ದೇನೆ ಎಂಬ ಪ್ರಶ್ನೆ ಹಾಕಿಕೊಂಡು ಸರಿಯಾದ ದಾರಿಯಲ್ಲಿ ನಡೆಯಬೇಕು. ಸಮಾಜದಲ್ಲಿ ಕೆಟ್ಟವರು, ಒಳ್ಳೆಯವರು ಇದ್ದೇ ಇರುತ್ತಾರೆ ಮನುಷ್ಯನ ಸ್ವಭಾವ ಒಬ್ಬರಿಗೆ ನೋವು ಉಂಟು ಮಾಡುವ ಕೆಲಸ ಮಾಡದೆ ಒಳ್ಳೆಯದಾಗಿ ಕೆಲಸ ಮಾಡಿದಾಗ ಶಾಂತಿ ನೆಮ್ಮದಿಯನ್ನು ಕಾಣಬಹುದು ಎಂದರು.
ಕೆರಗೋಡಿ ರಂಗಾಪುರ ಸುಕ್ಷೇತ್ರದ ಗುರುಪರಂಪರೆ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ದೇವಾಲಯ ನಿರ್ಮಾಣದಿಂದ ಮನುಷ್ಯನಿಗೆ ಜೀವನದಲ್ಲಿ ಶಾಂತಿ ನೆಮ್ಮದಿ ಲಭಿಸಲಿದೆ. ಧಾರ್ಮಿಕ ನಂಬಿಕೆಯಿಂದ ಆತ್ಮ ಜಾಗೃತಗೊಳ್ಳುತ್ತದೆ. ಒಡೆದು ಹೋಗಿರುವ ಮನಸ್ಸುಗಳನ್ನು ಒಗ್ಗೂಡಿಸಲಿದೆ ಎಂದರು.
ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ನಮ್ಮ ದೇಶದ ಧರ್ಮ ಸಂಸ್ಕೃತಿ ಸಂಸ್ಕಾರ ಕಳೆದುಹೋಗಿಲ್ಲ. ಭಾರತದ ಹಿಂದೂಧರ್ಮ ದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣ ಮಾಡಿದರೂ ನಮ್ಮ ಸಂಸ್ಕೃತಿ ಉಳಿದಿದೆ ಎಂದರು.
ಕೃಷಿ ಸಚಿವ ಬಿಸಿ ಪಾಟೀಲ್ ಮಾತನಾಡಿ, ಮನುಷ್ಯ ಒಳ್ಳೆ ಮನಸ್ಸಿಂದ ಒಳ್ಳೆ ಕೆಲಸ ಮಾಡಬೇಕು. ಹೆಚ್ಚು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಮನುಷ್ಯನಿಗೆ ನೆಮ್ಮದಿ ಸಿಗುತ್ತದೆ ಎಂದರು.
ಕುಪ್ಪೂರು ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ದೇಸಿ ಕೇಂದ್ರದ ಸ್ವಾಮೀಜಿ ಮಾಜಿ ಶಾಸಕ ಬಿ.ನಂಜಮರಿ ಕೆಎಂಎಫ್ ನಿರ್ದೇಶಕ ಎಂ.ಪಿ. ಪ್ರಕಾಶ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಅಪಾರ ಭಕ್ತಾದಿಗಳು ಭಾಗವಹಿಸಿದ್ದರು. ಎಲ್ಲಾ ಭಕ್ತಾದಿಗಳಿಗೂ ಅನ್ನದಾಸೋಹವನ್ನು ಏರ್ಪಡಿಸಲಾಯಿತು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5