ತುರುವೇಕೆರೆ: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗಿರದೆ, ಹಲವು ಭಾಷಾಜ್ಞಾನವನ್ನು ಬೆಳೆಸಿಕೊಳ್ಳಬೇಕು. ಇದು ಮುಂದಿನ ವೃತ್ತಿ ಬದುಕಲ್ಲಿ ಬಹು ಮುಖ್ಯವಾದ ಪರಿಣಾಮವನ್ನು ಬೀರುತ್ತದೆ ಎಂದು ಗ್ಲೋಬಲ್ ಎಂಬಸ್ಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್ ದೇವರ ಮನೆ ತಿಳಿಸಿದರು.
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ. ಮಾತನಾಡಿ, ರಾಜ್ಯದಲ್ಲಿ 96,854 ವಿದ್ಯಾರ್ಥಿಗಳಿಗೆ ಇದುವರೆಗೆ ಶಿಷ್ಯವೇತನವನ್ನು ಪಡೆಯುತ್ತಿದ್ದು 114 ಕೋಟಿ ಮೊತ್ತ ಇದುವರೆಗೆ ವಿತರಿಸಲಾಗಿದೆ. ವಿದ್ಯಾರ್ಥಿಗಳು ಈ ಮೊತ್ತವನ್ನು ಉತ್ತಮ ರೀತಿಯಲ್ಲಿ ವಿನಿಯೋಗಿಸುವಂತೆ ಮಾರ್ಗದರ್ಶನ ನೀಡಿದರು.
ತುರುವೇಕೆರೆಯ ಹಿರಿಯ ವಕೀಲರಾದ ಶ್ರೀಧನಪಾಲ್ ರವರು ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಿಸಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದು ತಂದೆ –ತಾಯಿಗೆ ಗೌರವ, ಗುರು–ಹಿರಿಯರಲ್ಲಿ ಭಕ್ತಿಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀ ಸುವರ್ಣ ರವರು ಯೋಜನೆಯ ವಿವಿಧ ಕಾರ್ಯಕ್ರಮಗಳು, ಕಾರ್ಯವೈಖರಿ ಹಾಗೂ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು.
ಇನ್ನು ಕಾರ್ಯಕ್ರಮಕ್ಕೆ ಗಣ್ಯರನ್ನು ತುರುವೇಕೆರೆ ಯೋಜನಾಧಿಕಾರಿ ಯಶೋಧರ್ ಸ್ವಾಗತಿಸಿದರು, ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ ಮೇಲ್ವಿಚಾರಕರುಗಳು ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296