ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ವಾಮಾಚಾರ, ಸಭೆ ನಡೆಸಲು ಬಿಡದೆ ಇರುವ ಕೆಲಸ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವೀಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಅನೇಕ ವೋಟ್ ಅನ್ಯಾಯ ಆಗಿದೆ. ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ, ಷಡ್ಯಂತ್ರ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು. ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296