ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.
ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ.
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB