ತುಮಕೂರು: ನಾಗಮೋಹನ್ ದಾಸ್ ಆಯೋಗ ನೀಡಿರುವ ಒಳಮೀಸಲಾತಿ ವರದಿಯನ್ನು ‘ಅವೈಜ್ಞಾನಿಕ’ ಎಂದು ಖಂಡಿಸಿರುವ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ, ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ.
ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರ ನೇತೃತ್ವದಲ್ಲಿ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಈ ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಜನರು ಭಾಗವಹಿಸುವಂತೆ ಕರೆ ನೀಡಲಾಗಿದೆ.
ನಾಳೆ ಪೂರ್ವಭಾವಿ ಸಭೆ:
ಈ ಬೃಹತ್ ಪ್ರತಿಭಟನೆಯ ಸಿದ್ಧತೆಗಾಗಿ ತುಮಕೂರು ಜಿಲ್ಲೆಯ ಸಮುದಾಯದ ಪ್ರಮುಖರ ಪೂರ್ವಭಾವಿ ಸಭೆಯನ್ನು ಫೆಬ್ರವರಿ 17ರ ಮಂಗಳವಾರದಂದು ಆಯೋಜಿಸಲಾಗಿದೆ. ನಗರದ ಆದರ್ಶ ನಗರದಲ್ಲಿರುವ ‘ದಲಿತ ಛಲವಾದಿ ಭವನ’ದಲ್ಲಿ (ಟುಡಾ ಕಚೇರಿ ಎದುರು) ಬೆಳಿಗ್ಗೆ 10:30ಕ್ಕೆ ಸಭೆ ನಡೆಯಲಿದೆ.
ಸಮುದಾಯದ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಹೋರಾಟದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಖಂಡರು, ರಾಜಕಾರಣಿಗಳು, ನಿವೃತ್ತ ನೌಕರರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಮುಖಂಡರಾದ ಪಿ.ಚಂದ್ರಪ್ಪ, ಶ್ರೀನಿವಾಸಯ್ಯ ಮತ್ತು ಸಿ. ಭಾನುಪ್ರಕಾಶ್ ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


