ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಯೋಚಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ. ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ.
“ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.
ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2025ರ ಮಾರ್ಚ್ 31ರ ವರೆಗೆ ಸಾರ್ವತ್ರಿಕ ರಜಾ ದಿನಗಳಂದು ಮತ್ತು ಭಾನುವಾರದಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5: 00ರ ವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರಿನ ಕಚೇರಿಯನ್ನು ತೆರೆಯುವ ಮೂಲಕ 2024-25 ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4