ತುಮಕೂರು: ಪದ್ಮಶ್ರೀ ಪುರಸ್ಕೃತ ಡಾ.ಸೂಲಗಿತ್ತಿ ನರಸಮ್ಮನವರ 101ನೇ ಜನ್ಮ ದಿನಾಚರಣೆಯು ಮಾರ್ಚ್ 6ರಂದು ಆಚರಿಸಲು ಉದ್ದೇಶಿಸಿದ್ದು, 101ನೇ ಜನ್ಮ ದಿನದ ಆಚರಣೆ ಸಮಿತಿಯು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ತುಮಕೂರಿನ ಎಂ.ಜಿ.ರಸ್ತೆಯ ಬಾಲ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲೇ ಡಾ.ಸೂಲಗಿತ್ತಿ ನರಸಮ್ಮನವರ ಭಾವಚಿತ್ರ ಕಲಾಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಪ್ರಥಮ ಬಹುಮಾನ 5 ಸಾವಿರ ರೂ. ದ್ವಿತೀಯ ಬಹುಮಾನ 3 ಸಾವಿರ ರೂಪಾಯಿ, ತೃತೀಯ ಬಹುಮಾನವಾಗಿ 2 ಸಾವಿರ ರೂಪಾಯಿ ನಗದು ಘೋಷಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಗಂಗಸಂದ್ರದ ಸ್ಮಾರಕ ಸ್ಥಳದಲ್ಲಿ ಗದ್ದಿಗೆ ಪೂಜೆ ನೆರವೇರಲಿದೆ. 11:30ಕ್ಕೆ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ರಾಷ್ಟ್ರೀಯ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು 101 ಗರ್ಭಿಣಿಯರಿಗೆ ಸೀಮಂತ ಕಾರ್ಯ ಮತ್ತು ಮಡಿಲು ತುಂಬುವ ಕಾರ್ಯಕ್ರಮ ಹಾಗೂ 180 ಸೂಲಗಿತ್ತಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಊಟ, 2:30ಕ್ಕೆ ಕನ್ನಡ ಪ್ರಸಿದ್ಧ ಕವಿಗಳಿಂದ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB