ಚಿತ್ರದುರ್ಗ: ಕೋಡಿಹಳ್ಳಿ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಶ್ರೀಗಳಾದ ಶ್ರೀಶ್ರೀಶ್ರೀ ಪರಮಪೂಜ್ಯ ಮಾರ್ಕಂಡೇಯ ಮುನಿಸ್ವಾಮೀಜಿಗಳು ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಲೋಕಾಪಯೋಗಿ ಸಚಿವ ಗೋವಿಂದ ಕಾರಜೋಳರವರು ಸ್ವಾಮೀಜಿಯ ಅಂತಿಮ ದರ್ಶನ ಪಡೆದರು.
ಸ್ವಾಮೀಜಿಗಳ ಅಂತಿಮ ದರ್ಶನದ ವೇಳೆ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು, ಹಿರಿಯೂರು ಶಾಸಕ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ , ಪುರಸಭೆ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಹಾಜರಿದ್ದರು.
ವಾಟ್ಸಾಪ್ ಗ್ರೂಪ್ ಸೇರಿ: