ಚಲಿಸುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಆಟೋ ಚಾಲಕ ಹಾಗೂ ಸಂಬಂಧಿಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯವಾಗಿರೋ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಆಟೋಗೆ ಕಾರು ಗುದ್ದಿದ ರಭಸಕ್ಕೆ ಕಾರಿನ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿದ್ದು ಚಾಲಕ ಬಚಾವ್ ಆಗಿದ್ದಾನೆ. ಘಟನೆಯಲ್ಲಿ ಗಾಯವಾಗಿರೋ ವ್ಯಕ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಘಟನೆ ಸಂಬಂಧ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


